ಗುಜರಾತ್: ಅಕ್ಟೋಬರ್ 31:ಗುಜರಾತ್ನ ಕಚ್ನಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಿಸಿದ್ದಾರೆ. ಕಚ್ನಲ್ಲಿ ಬಿಎಸ್ಎಫ್ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ, ಅವರಿಗೆ ಸ್ವೀಟ್ ಹಂಚಿದ್ದಾರೆ.
ಕಚ್ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಸರ್ ಕ್ರೀಕ್ ಬಳಿಯ ಲಕ್ಕಿ ನಾಲಾದಲ್ಲಿ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿದ ಪ್ರಧಾನಿ ಮೋದಿ ಭಾರತೀಯ ಸೈನಿಕರಿಗೆ ಸಿಹಿತಿಂಡಿಗಳನ್ನು ತಿನ್ನಿಸಿದ್ದಾರೆ.
2014ರಿಂದ ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷವೂ ದೀಪಾವಳಿಯನ್ನು ದೇಶದ ವಿವಿಧ ಮೂಲೆಗಳಲ್ಲಿ ನಿಯೋಜಿಸಲಾದ ಸೈನಿಕರೊಂದಿಗೆ ಆಚರಿಸುವ ಸಂಪ್ರದಾಯ ರೂಢಿಸಿಕೊಂಡಿದ್ದಾರೆ. ಸೇನೆಯ ಸಮವಸ್ತ್ರವನ್ನು ಧರಿಸಿರುವ ಪ್ರಧಾನಿ ಮೋದಿ ಕಚ್ನಲ್ಲಿ ನಿಯೋಜಿಸಲಾದ ಸೈನಿಕರಿಗೆ ಸಿಹಿತಿಂಡಿಗಳನ್ನು ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.