ಮುಲ್ಕಿ: ನವೆಂಬರ್ 09: ಯುವಕನೋರ್ವ ತನ್ನ ಪತ್ನಿ ಹಾಗು ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿಯ ಬೆಳ್ಳಾಯರುನಲ್ಲಿ ತಿಳಿದುಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದ್ದು, ಪತ್ನಿ ಪ್ರಿಯಾಂಕ (28) ಹಾಗು ಮಗು ಹೃದಯ್ (4) ಹತ್ಯೆಗೀಡಾದವರು ಎಂದು ತಿಳಿದುಬಂದಿದೆ.
ಶಕ್ರವಾರ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಮುಲ್ಕಿಯ ಬೆಳ್ಳಾಯರುನಲ್ಲಿ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ.
ಶುಕ್ರವಾರ ಮಧ್ಯಾಹ್ನ ಯುವಕನೋರ್ವ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುವಾಗ ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದುಬಂದಿದ್ದು, ಮನೆಗೆ ಬಂದಾಗ ಪತ್ನಿ ಹಾಗು ಮಗು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಮಂಗಳೂರು ಎಸಿಪಿ ಶ್ರೀಕಾಂತ್, ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾಧರ ಭೇಟಿ ನೀಡಿ ಪರಿಶೀಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಈ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಮೂವರ ಸಾವು ಹಾಗೂ ಅದರ ಹಿಂದಿನ ಕಾರಣಗಳ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ