ಉಡುಪಿ :ನವೆಂಬರ್ 12:ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಮಣಿಪಾಲ ಜಿ.ಎಸ್.ಎಲ್.ಆರ್ ಘಟಕದ ಟ್ಯಾಂಕನ್ನು ಸ್ವಚ್ಛಗೊಳಿಸಲಿರುವ ಹಿನ್ನೆಲೆಯಲ್ಲಿ ನವೆಂಬರ್ 14ರಂದು ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ
ಹೀಗಾಗಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಕುಡಿಯುವ ನೀರನ್ನು ಸಂಗ್ರಹಿಸಿಟ್ಟುಕೊಂಡು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.