ಮಂಗಳೂರು : ನವೆಂಬರ್ 14:ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದು ಬುಧವಾರದಂದು ಮೃತ ಪಟ್ಟಿದ್ದಾರೆ
ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು.
ಕೂಡಲೇ ಕಂಕನಾಡಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ವೈದ್ಯರ ತಂಡ ತಿಳಿಸಿತ್ತು.
ಗ್ಲೋರಿಯಾ ಅವರಿಗೆ ಫುಡ್ ಅಲರ್ಜಿ (ಅನಾಫಿಲ್ಯಾಕ್ಟಿಕ್ ರಿಯಾಕ್ಷನ್) ಸಮಸ್ಯೆ ಇತ್ತು ಇದರಿಂದಾಗಿ ಈ ಹಿಂದೆಯೂ ಸ್ವಲ್ಪ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿ ಬಳಿಕ ಚೇತರಿಸಿಕೊಂಡಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.