ಕಾರ್ಕಳ :ನವೆಂಬರ್ 15:ಇತ್ತೀಚಿಗೆ ಆತ್ಮಹತ್ಯೆ ಪ್ರಕರಣ ಗಳು ಹೆಚ್ಚುತ್ತಿದೆ, ಎಲ್ಲಾ ಸಮಸ್ಯೆಗೂ ಆತ್ಮಹತ್ಯೆ ಒಂದೇ ಪರಿಹಾರ ಅಲ್ಲ ಸೋಲು ಬಂದಾಗ ಎದುರಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗುವವರು ಯೋಚನೆ ಮಾಡಬೇಕು ಏನೆಂದರೆ ಸಾವು ನಿಮ್ಮ ಸಮಸ್ಯೆಗಳನ್ನು ಪರಿಹಾರ ಮಾಡುವುದಿಲ್ಲ. ಅದು ನಿಮ್ಮನ್ನು ನಂಬಿದವರನ್ನು ಪಾತಾಳಕ್ಕೆ ತಳ್ಳುತ್ತದೆ.
ಪತಿ ತೀರಿಕೊಂಡ ಬಳಿಕ ಮಾನಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ.
ಸೌಮ್ಯ(39) ಎಂಬವರು ಆತ್ಮಹತ್ಯೆಗೆ ಶರಣಾದ ಮಹಿಳೆ,ಮಿಯ್ಯಾರು ಚರ್ಚ್ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.
ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರ ಪತಿ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಸೌಮ್ಯ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ