ಉಡುಪಿ : ನವೆಂಬರ್ 16:ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆ ನವೆಂಬರ್ 15ರಂದು ನಡೆಯಿತು
ಈ ಹಿಂದೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಮಲ್ಪೆ ಬೀಚ್ ಹಾಗೂ ಸೈಂಟ್ ಮೇರೀಸ್ ದ್ವೀಪದ ನಿರ್ವಹಣೆಯನ್ನು ಮಲ್ಪೆ ಅಭಿವೃದ್ಧಿ ಸಮಿತಿಗೆ ನೀಡಿತ್ತು. ಆದರೆ ಪ್ರಸ್ತುತ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೆ ಹಾಗೂ ಸಮಿತಿಯ ಕಾರ್ಯ ವ್ಯಾಪ್ತಿಗೆ ಇದು ಅಡೆತಡೆಯಾಗುತ್ತಿರುವುದರಿಂದ ಹಾಗೂ ಕಾನೂನು ವ್ಯಾಪ್ತಿಯಲ್ಲೂ ತೊಂದರೆಯಾ ಗುತ್ತಿರುವ ಹಿನ್ನೆಲೆಯಲ್ಲಿ ಇವುಗಳ ನಿರ್ವಹಣೆಯ ಅಧಿಕಾರವನ್ನು ಹಿಂದಕ್ಕೆ ಪಡೆದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗೆ ಮರಳಿ ನೀಡಲಾಗಿದೆ ಎಂದವರು ತಿಳಿಸಿದರು.
ಮಲ್ಪೆಯ ಕಡಲತೀರದಲ್ಲಿ ನಿರ್ಮಾಣಗೊಂಡಿರುವ ಪ್ಲೋಟಿಂಗ್ ಬ್ರಿಡ್ಜ್ ಚಟುವಟಿಕೆಯನ್ನು ಖಾಸಗಿಯವರು ನಿರ್ವಹಿಸು ತ್ತಿದ್ದು, ಇದರ ಆದಾಯದಲ್ಲಿ ಶೇ.75:25 ಅನುಪಾತದ ಅಡಿಯಲ್ಲಿ ನಿರ್ವಹಣೆ ಹಾಗೂ ಬೀಚ್ ಸ್ವಚ್ಛತಾ ನಿರ್ವಹಣೆಯನ್ನು ಬೀಚ್ ಅಭಿವೃದ್ಧಿ ಸಮಿತಿಯೇ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಲ್ಪೆ ಬೀಚ್‌ನಲ್ಲಿ ಜಿಪ್‌ಲೈನ್ ಚಟುವಟಿಕೆ ನಡೆಸಲು ಕೆಲವರು ಮುಂದೆ ಬಂದಿದ್ದು, ಅವರು ಸೂಕ್ತ ಪ್ರಾಧಿಕಾರದ ಪರವಾ ನಿಗೆ ಮತ್ತು ಎನ್‌ಓಸಿ ಪಡೆದು ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ ಅವುಗಳನ್ನು ನಡೆಸುವುದು ಸೂಕ್ತ ಎಂದರು.
ಸಭೆಯಲ್ಲಿ ಉಡುಪಿ ಶಾಸಕ ಯಶ್ವಾಲ್ ಎ ಸುವರ್ಣ, ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಡಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದರು.