ಉಡುಪಿ : ನವೆಂಬರ್ 22:ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ 32ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ನ.24 ರವಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಭಜನಾ ಮಂದಿರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.