ಉಡುಪಿ: ನವೆಂಬರ್ 22:ಉಡುಪಿಯ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ರಚಿಸಿ ಫೋಟೋ ದುರ್ಬಳಕೆ ಮಾಡಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು ಉಡುಪಿ ನಗರದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು,ಪ್ರಕರಣ ಧಾಖಲಾಗಿದೆ
ಫೇಸ್‌ಬುಕ್‌ನಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿ ನಕಲಿ ಖಾತೆ ಸೃಜಿಸಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.ಆದ್ದರಿಂದ ಅಂತಹ ಯಾವುದೇ ಸಂದೇಶಗಳಿಗೆ ಸಾರ್ವಜನಿಕರು ಸ್ಪಂದಿಸದಂತೆ ಮನವಿ ಮಾಡಿದ್ದಾರೆ
ಹಾಗೆಯೇ ಯಾರಾದರೂ ನಿಮಗೆ ನನ್ನ ಹೆಸರಿನಲ್ಲಿ ಸಂದೇಶ ಕಳುಹಿಸಿದರೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಕೂಡ ಅವರು ತಿಳಿಸಿದ್ದಾರೆ.