ಉಡುಪಿ, ನವೆಂಬರ್ 25 : ನಾಳೆ ಮಂಗಳವಾರ (ನವೆಂಬರ್ 26)ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಮಾಹಿತಿ ನೀಡಿದೆ.
ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಉಡುಪಿ ನಗರಸಭೆ ವಿಶೇಷ ಕಾರ್ಯಕ್ರಮವನ್ನು ಅಜ್ಜರಕಾಡಿನ ಪುರಭವನದಲ್ಲಿ ಆಯೋಜಿಸಿದೆ. ಜೊತೆಗೆ ಉಡುಪಿ ನಗರಸಭಾ ಕಚೇರಿಯಿಂದ ಪುರಭವನದವರೆಗೆ ಪೌರಕಾರ್ಮಿಕ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ