ಬೆಂಗಳೂರು : ನವೆಂಬರ್ 26:2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ NEET, JEE (M&A), CLAT, CA Foundation 2 MAT ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು 07.12.2024 ರ ಒಳಗಡೆ ಅರ್ಜಿ ಸಲ್ಲಿಸಬಹುದು
ವಿಜಯಪುರ, ದಾವಣಗೆರೆ, ತುಮಕೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ NEET ಮತ್ತು JEE (M&A) ಪರೀಕ್ಷಾ ಪೂರ್ವ ತರಬೇತಿಗಳನ್ನು ಹಾಗೂ ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ CLAT, CA Foundation 2 MAT (class room coaching) ನೀಡುತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07.12.2024ರ ಸಂಜೆ 3:00 ಗಂಟೆ ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ 8050770004 ಸಂಪರ್ಕಿಸಬಹುದಾಗಿದೆ.