ಉಡುಪಿ :ನವೆಂಬರ್ 26:ಸಂವಿಧಾನ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಪುತ್ಥಳಿಗೆ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಶ್ರೀ ಎನ್. ಮಹೇಶ್ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಶ್ರೀ ವಿಕಾಸ್ ಪುತ್ತೂರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ದಿನಕರ ಬಾಬು, ಶ್ರೀ ದಿನೇಶ್ ಅಮೀನ್, ಶ್ರೀಮತಿ ಶ್ಯಾಮಲ ಕುಂದರ್, ಶ್ರೀಮತಿ ಶಿಲ್ಪಾ ಸುವರ್ಣ, ಶ್ರೀಮತಿ ರೇಷ್ಮಾ ಶೆಟ್ಟಿ, ಶ್ರೀ ವಿಜಯ ಕುಮಾರ್, ಶ್ರೀ ಗುರುರಾಜ್, ಶ್ರೀ ಕಿಶೋರ್ ಮೊದಲಾದವರು ಉಪಸ್ಥಿತರಿದ್ದರು.