ಉಡುಪಿ:ನವೆಂಬರ್ 30:ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 12 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.