ಉಡುಪಿ : ನವೆಂಬರ್ 30:ಉಡುಪಿಯ ತಾಲೂಕು ಪಂಚಾಯತ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು ಉದ್ಘಾಟಿಸಿದರು , ಈ ಸಂದರ್ಭದಲ್ಲಿ ಅನುಷ್ಠಾನ ಸಮಿತಿಯ ಸದಸ್ಯರನ್ನು ಅಭಿನಂದಿಸಿ, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಲು ಕರೆ ನೀಡಿದರು
ರಾಜ್ಯ ಸರ್ಕಾರದ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಈಗಾಗಲೇ ಜನರ ಮುಖದಲ್ಲಿ ಮಂದಹಾಸ ಮೂಡಿಸಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಷ್ಟದ ಜೀವನ ನಡೆಸುತ್ತಿರುವ ಬಡ ಕುಟುಂಬಗಳಿಗೆ ಪಂಚ ಗ್ಯಾರಂಟಿ ಯೋಜನೆಗಳು ವರದಾನವಾಗಿವೆ. ಬಡವರ, ಶ್ರಮಿಕರ, ರೈತರ ಉದ್ಧಾರಕ್ಕಾಗಿ ಅನುಷ್ಠಾನಗೊಂಡಿರುವ ಈ ಯೋಜನೆಗಳು ಪರಿಣಾಮಕಾರಿಯಾಗಿ ಮತ್ತಷ್ಟು ಜನರಿಗೆ ತಲುಪಲಿ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿರುವುದು ಖುಷಿಯ ವಿಚಾರ ಎಂದರು .
ಈ ಸಂದರ್ಭದಲ್ಲಿ ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ ಕೊಡವೂರು, ದಿನಕರ್ ಹೇರೂರು, ಜಿಲ್ಲಾಧಿಕಾರಿಗಳಾದ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕಾಂಗ್ರೆಸ್ ಮುಖಂಡರಾದ ಉದಯಕುಮಾರ್ ಶೆಟ್ಟಿ, ಪ್ರಸಾದ ಕಾಂಚನ್, ಎಂ.ಎ ಗಫೂರ್, ದಿನೇಶ್ ಹೆಗ್ಡೆ, ಲಾವಣ್ಯ ಬಲ್ಲಾಳ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.