ಬೆಂಗಳೂರು :ಡಿಸೆಂಬರ್ 01:ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದ ಹಾಸನ ಮೂಲದ ಸಕಲೇಶಪುರದ ನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ .
ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದ ಶೋಭಿತಾ ಅವರು ಮದುವೆ ಬಳಿಕ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿತ್ತು
ನಟಿಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ . ಶನಿವಾರ (ನವೆಂಬರ್ 30) ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಶನಿವಾರವಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿ ಶೇರ್ ಮಾಡಿದ್ದರು. ಆ ಬಳಿಕ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದ್ದು ಅಚ್ಚರಿಗೆ ಕಾರಣ ಆಗಿದೆ.
ಕಳೆದ ವರ್ಷ ಮೇ 22ರಂದು ಮದುವೆಯಾಗಿದ್ದ ಶೋಭಿತಾ ಆ ನಂತರ ಕಿರುತೆರೆಯಿಂದ ಅಂತರವನ್ನು ಕಾಪಾಡಿಕೊಂಡಿದ್ದರು. ಆದರೂ ಅಚ್ಚರಿ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದ ಶೋಭಿತಾ ತಮ್ಮ ಮದುವೆಯ ಫೋಟೊಗಳನ್ನು ಇಲ್ಲಿಯವರೆಗೆ ಹಂಚಿಕೊಂಡಿಲ್ಲ.
ಆಘಾತಕ್ಕೊಳಗಾದ ಕುಟುಂಬಸ್ಥರು ಹಾಗೂ ಸ್ನೇಹಿತರು ಹೈದ್ರಾಬಾದ್‌ನತ್ತ ಹೊರಟಿದ್ದಾರೆ ಎನ್ನಲಾಗಿದೆ