ಹಾಸನ : ಡಿಸೆಂಬರ್ 02: ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಕೆಲ ದಿನಗಳ ಹಿಂದಷ್ಟೇ ಪೊಲೀಸ್ ಅಕಾಡೆಮಿಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ವೇಳೆ ಯುವ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮೈಸೂರಿನಿಂದ (Mysuru) ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬರುತ್ತಿದ್ದ ವೇಳೆ ಜೀಪ್ ಟಯರ್ ಸಿಡಿದು ವಾಹನ ಪಲ್ಟಿಯಾಗಿ ತೀವ್ರವಾಗಿ ಗಾಯಗೊಂಡಿದ್ದ 26 ವರ್ಷದ ಹರ್ಷಬರ್ದನ್ ಚಿಕಿತ್ಸೆ ಫಲಕಾರಿಯಾಗದೇ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹರ್ಷಬರ್ದನ್ ಪ್ರೊಬೆಷನರಿ ಐಪಿಎಸ್ ಅಧಿಕಾರಿ. ಡ್ಯೂಟಿಗೆ ರಿಪೋರ್ಟ್ ಮಾಡಲು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ.
ಅವಘಾತದಲ್ಲಿ ತಲೆ ತೀವ್ರವಾಗಿ ಗಾಯಗೊಂಡ ಹರ್ಷಬರ್ದನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನದ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೈಸೂರಿನ ಪೊಲೀಸ್ ಅಕಾಡೆಮಿಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದೆ. ಐಪಿಎಸ್ ವೃತ್ತಿ ಜೀವನ ಆರಂಭಿಸಿದ ಮೊದಲ ದಿನವೇ ಹರ್ಷಬರ್ದನ್ ಅಸುನೀಗಿದ್ದಾರೆ.
ಹರ್ಷಬರ್ಧನ್ ನಿನ್ನೆಯಷ್ಟೇ ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಟ್ರೇನಿಂಗ್ ಮುಗಿಸಿದ್ದರು. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಇವತ್ತು ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಡಿವೈಎಸ್‌ಪಿಯಾಗಿ ಚಾರ್ಜ್ ತೆಗೆದುಕೊಳ್ಳಬೇಕಿತ್ತು. ಐಜಿಪಿ ಬೋರಲಿಂಗಯ್ಯ ರಿಪೋರ್ಟ್ ಮಾಡಿಕೊಂಡು ಹಾಸನಕ್ಕೆ ಜೀಪ್‌ನಲ್ಲಿ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಅನ್ನುವಷ್ಟರಲ್ಲಿ ದುರಂತ ಸಂಭವಿಸಿದೆ