ತುಮಕೂರು ಡಿಸೆಂಬರ್ 02:: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಶಂಕು ಸ್ಥಾಪನೆ ನೆರವೇರಿಸಿದರು. ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ಕೊಟ್ಟರು.
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದರು. ಆದಷ್ಟು ಶೀರ್ಘದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಿ ” ಎಂದು ತಿಳಿಸಿದರು.