ಉಡುಪಿ:ಡಿಸೆಂಬರ್ 03: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಮಾಜ ಕಾರ್ಯಕರ್ತ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಡಿ.11 ಕೊನೆ ದಿನವಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಮಾಜ ಕಾರ್ಯ ಅಥವಾ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 25,000 ರೂ. ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎರಡು ವರ್ಷದ ಕಾರ್ಯ ನಿರ್ವಹಣೆ ಅನುಭವ ಹೊಂದಿರಬೇಕು. ಆರೋಗ್ಯ ವಲಯದಲ್ಲಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಈ ಹುದ್ದೆಯ ನೇಮಕಾತಿ ಗುತ್ತಿಗೆ ಆಧಾರದ ಮೇಲೆ ನಡೆಯಲ್ಲಿದ್ದು, ಒಂದು ವರ್ಷದ ಅವಧಿಗೆ ಅಭ್ಯರ್ಥಿಯನ್ನು ನೇಮಕಾತಿ ಮಾಡಲಾಗುವುದು. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆ ನಡೆಯಲಿದ್ದು, ಈ ಹುದ್ದೆಗೆ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಮೇಲೆ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಉಡುಪಿ ಜಿಲ್ಲಾಡಳಿತದ ಅಧಿಕೃತ ಜಾಲತಾಣದಲ್ಲಿ ನೀಡಲಾದ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆ ಮತ್ತು ಪ್ರಮಾಣಪತ್ರದೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕು.
ಅರ್ಜಿ ಸಲ್ಲಿಕೆ ವಿಳಾಸ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಉಡುಪಿ.
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು udupi.nic.in ಭೇಟಿ ನೀಡಬಹುದು