ಬ್ರಹ್ಮಾವರ:ಡಿಸೆಂಬರ್ 03: ಜಿಲ್ಲೆಯಲ್ಲಿ ನಿನ್ನೆ ಸುರಿದ ಮಳೆಗೆ ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ನೀಲಾವರ ಸಮೀಪದ ಸೊಣಗಾರ ಬೆಟ್ಟು ಎಂಬಲ್ಲಿ ಸಂಭವಿಸಿದೆ.
ಇಲ್ಲಿನ ರಾಧು ಶೆಡ್ತಿಯವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್‌ಉಪಕರಣಗಳಿಗೆ ಹಾನಿಯುಂಟಾಗಿದ್ದು, ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.