ಉಡುಪಿ :ಡಿಸೆಂಬರ್ 05: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವಡೆ ಇಂದಿನಿಂದ ಡಿ.8 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ, ಕೊಡಗು , ಹಾಸನ, ಬೆಂಗಳೂರು ನಗರ, ತುಮಕೂರು, ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಹಾವೇರಿ, ಗದಗ ಭಾಗದಲ್ಲಿ ಮಳೆಯಾಗಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.