ಕಾರ್ಕಳ : ಡಿಸೆಂಬರ್ 06: ಯುವತಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಉಡುಪಿಯ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದಿಂದ ಪ್ರಮುಖ ಆರೋಪಿ ಅಲ್ತಾಫ್ ಗೆ ಜಾಮೀನು ನೀಡಿ ಆದೇಶಸಿದೆ.
ಉಡುಪಿ ಜಿಲ್ಲಾ ಹೆಚ್ಚುವರಿ ಕೋರ್ಟಿನಿಂದ ಇದೀಗ ಜಾಮೀನು ಮಂಜೂರು ಮಾಡಲಾಗಿದೆ. ಆಗಸ್ಟ್ 24ರಂದು ಯುವತಿಗೆ ಮಾದಕ ವಸ್ತು ನೀಡಿ ಅತ್ಯಾಚಾರ ಎಸಿಗಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು .
ದೂರಿನ ಆಧಾರದ ಮೇಲೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಪ್ರಮುಖ ಆರೋಪಿ ಅಲ್ತಾಫ್ ಗೆ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು ನೀಡಿದೆ.