ಉಡುಪಿ:ಡಿಸೆಂಬರ್ 06:ಭಾವಿ ಪರ್ಯಾಯ ಶ್ರೀ ಶೀರೂರು ಮಠದ ಪರಮ ಪೂಜ್ಯ ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಶ್ರೀ ಕೃಷ್ಣಪೂಜಾ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ ಪ್ರಥಮ ಮುಹೂರ್ತ ”ಬಾಳೆ ಮುಹೂರ್ತ” ಕಾರ್ಯಕ್ರಮ ಸಂಪನ್ನ ಗೊಂಡಿತು
ಪೂರ್ಣಪ್ರಜ್ಞ ಕಾಲೇಜು ಬಳಿಯಶೀರೂರು ಮಠದ ತೋಟದಲ್ಲಿ ಭಾವಿ ಪರ್ಯಾಯ ಪೀಠಾಧೀಶ ವೇದವರ್ಧನತೀರ್ಥ ಶ್ರೀಪಾದರು ವೇದವಾದ್ಯ ಘೋಷದ ನಡುವೆ ಬಾಳೆ ಸಸಿನೆಟ್ಟರು. ಜೊತೆಗೆ ತುಳಸಿ ಸಸಿ ಹಾಗೂ ಕಬ್ಬಿನ ಕಂದು ನೆಡಲಾಯಿತು. ವಿದ್ವಾನ್ ಗಿರಿರಾಜ ಉಪಾಧ್ಯಾಯ ಕಂಬ್ಳಕಟ್ಟ ಧಾರ್ಮಿಕ ವಿಧಿ ನೆರವೇರಿಸಿದರು. ಶೀರೂರು ಮಠದ ದಿವಾನ ಡಾ. ಉದಯ ಸರಳತ್ತಾಯ, ಶ್ರೀಮಠದ ಪಾರುಪತ್ಯಗಾರ ಶ್ರೀಶ ಭಟ್ ಕಡೆಕಾರ್ ಇದ್ದರು. ಶ್ರೀಮಠದ ಮೇಸ್ತ್ರಿ ಪದ್ಮನಾಭ ಸಹಕರಿಸಿದರು.