ಬಂಟ್ವಾಳ :ಡಿಸೆಂಬರ್ 09:ಜೋಕಾಲಿಯಲ್ಲಿ ಆಟ ಆಡುತ್ತಿದ್ದಾಗ ಬಾಲಕಿಯ ಕುತ್ತಿಗೆಗೆ ಹಗ್ಗ ಸುತ್ತಿ ಸಾವನ್ನಪ್ಪಿದ ದಾರುಣ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಭಾನುವಾರ ಸಂಜೆ ವೇಳೆ ಸಂಭವಿಸಿದೆ.
ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಮೃತಪಟ್ಟ ಬಾಲಕಿ.ತೀರ್ಥಶ್ರೀ ಶೇರಾ ಶಾಲೆಯಲ್ಲಿ ೩ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯು ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.