ಬೆಂಗಳೂರು : ಡಿಸೆಂಬರ್ 10: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ.
ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿ ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.