ಬೆಂಗಳೂರು : ಡಿಸೆಂಬರ್ 10: ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸರ್ಕಾರಿ ಕಚೇರಿ ಸೇರಿ ರಜೆ ಘೋಷಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಈ ಬಗ್ಗೆ ಸದನದಲ್ಲಿ ಸಿಎಂ ಸಿದ್ದರಾಮಯ್ಯನವರು ಪ್ರಕಟಿಸಲಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ರಾಜ್ಯ ಸರ್ಕಾರವು ಸಹ ಸಂತಾಪ ಸೂಚಿಸಿದೆ. ನಾಳೆ ರಜೆ ಘೋಷಿಸಿ ಅಧಿಸೂಚನೆ ಹೊರಡಿಸಿರುವ ಸರ್ಕಾರ, ನಾಳೆ (ಡಿಸೆಂಬರ್ 11) ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ಡಿಸೆಂಬರ್ 10ರಿಂದ ಡಿ.12ರವರೆಗೆ ಮೂರು ದಿನಗಳ ಕಾಲ ಶೋಕಾಚರಣೆ ನಡೆಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜನವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ.