ಉಡುಪಿ :ಡಿಸೆಂಬರ್ 11:ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಒಲಿಂಪಿಕ್ಸ್ ಕ್ರೀಡೆಗಳನ್ನು ಜಿಲ್ಲೆಯಲ್ಲಿ ಸಂಘ ಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ವಹಿಸಿ ಮಾತನಾಡಿದರು.
2025ರ ಜ.16ರಿಂದ 23ರ ವರೆಗೆ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟಗಳು ನಡೆಯಲಿದ್ದು, ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.
ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ರಾಜ್ಯ ಒಲಿಂಪಿಕ್ಸ್ ಕ್ರೀಡೆಗಳನ್ನು ಜಿಲ್ಲೆಯಲ್ಲಿ ಸಂಘ ಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 13ಕ್ಕೂ ಹೆಚ್ಚು ಕ್ರೀಡೆಗಳು 8 ದಿನಗಳ ಕಾಲ ಜಿಲ್ಲಾ ಕ್ರೀಡಾಂ ಗಣದಲ್ಲಿ ಹಾಗೂ ಮಾಹೆಯ ವಿ.ವಿ. ಕ್ರೀಡಾಂಗಣದಲ್ಲಿ ನಡೆಯಲಿದ್ದು, 3,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.
ಕ್ರೀಡಾಪಟುಗಳು, ಅಧಿ ಕಾರಿಗಳು, ತೀರ್ಪುಗಾರರು ಸಹಿತ ಕ್ರೀಡಾಕೂಟಕ್ಕೆ ಸಂಬಂಧಿಸಿದವರಿಗೆ ಅಗತ್ಯ ವಸತಿ ಸೌಕರ್ಯ, ಊಟೋಪಹಾರದ ವ್ಯವಸ್ಥೆ ಸಹಿತ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಕ್ರೀಡಾಕೂಟದ ಉದ್ಘಾಟನೆಗೆ ಮುಖ್ಯಮಂತ್ರಿಗಳು, ಸಚಿವರು ಬರುವ ಸಾಧ್ಯತೆಯಿದೆ ಎಂದರು.
ಮಾಹೆಯ ವಿ.ವಿ ಕ್ರೀಡಾಂಗಣದಲ್ಲಿ ಲಾನ್ ಟೆನಿಸ್, ಟೇಬಲ್ ಟೆನಿಸ್, ಬ್ಯಾಡ್ಮಿಂಟನ್, ಹಾಕಿ ನಡೆಯಲಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್, ಕಬಡ್ಡಿ, ಟೈಕೊಂಡ, ವಾಲಿಬಾಲ್ ಮೊದಲಾದ ಕ್ರೀಡೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.
ಕ್ರೀಡೆಗೆ ಅನುಗುಣವಾಗಿ ಮೈದಾನವನ್ನು ವ್ಯವಸ್ಥಿತವಾಗಿ ಸಜ್ಜುಗೊಳಿಸಬೇಕು. ಕ್ರೀಡಾಪಟು ಗಳಿಗೆ ಯಾವುದೇ ಕೊರತೆ ಆಗದಂತೆ ನೋಡಿ ಕೊಳ್ಳಲು ಮುಂದಾಗಬೇಕು ಎಂದು ಸೂಚಿಸಿದರು.
ಕ್ರೀಡೆಗಳನ್ನು ಯಶಸ್ವಿಯಾಗಿ ನಡೆಸಲು ಉಪ ಸಮಿತಿಗಳನ್ನು ರಚಿಸಬೇಕು ಹಾಗೂ ಸ್ವಯಂ ಸೇವಕರನ್ನು ನಿಯೋಜಿಸಿ ಶಿಸ್ತುಬದ್ಧವಾಗಿ ಕ್ರೀಡಾ ಕೂಟ ನಡೆಸಲು ಇಲಾಖೆಯ ಅ ಧಿಕಾರಿಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ., ಜಿ.ಪಂ. ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ.ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ಡಿಡಿಪಿಐ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಐ.ಪಿ ಗಡಾದ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಉಪಸ್ಥಿತರಿದ್ದರು.