ಡಿಸೆಂಬರ್ 14 : ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತದ ಹಾಗೂ ಚೆನ್ನೈ ಮೂಲದ ಡಿ ಗುಕೇಶ್‌ಗೆ (D Gukesh) ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶುಕ್ರವಾರ 5 ಕೋಟಿ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದಾರೆ. ಚೆನ್ನೈ ಗ್ರ್ಯಾಂಡ್‌ಮಾಸ್ಟರ್ ಗುಕೇಶ್ ಗುರುವಾರ ಸಿಂಗಾಪುರದಲ್ಲಿ ನಡೆದಿದ್ದ ಪ್ರಶಸ್ತಿ ಸುತ್ತಿನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ 18ನೇ ವಯಸ್ಸಿನಲ್ಲಿ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದರು.
ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಗುಕೇಶ್ ಪಾತ್ರರಾಗಿದ್ದಾರೆ. ವಿಶ್ವ ಕಿರಿಯ ಚೆಸ್ ಚಾಂಪಿಯನ್ ಡಿ ಗುಕೇಶ್ ಅವರ ಅದ್ಭುತ ಸಾಧನೆಯನ್ನು ಗೌರವಿಸಲು 5 ಕೋಟಿ ರೂಪಾಯಿ ನಗದು ಬಹುಮಾನವನ್ನು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಸ್ಟಾಲಿನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.