ಉಡುಪಿ :ಡಿಸೆಂಬರ್ 19: ಡಿಸೆಂಬರ್ 21 ರಂದು ಬೆಳಗ್ಗೆ 10.30 ಕ್ಕೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಭರಣ ಜ್ಯುವೆಲರ್ಸ್ ಪ್ರೈವೇಟ್ ಲಿಮಿಟೆಡ್ , ಕಾರ್ಪೊರೇಶನ್ ಬ್ಯಾಂಕ್ ರೋಡ್, ಉಡುಪಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಪಿ.ಯು.ಸಿ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ
ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸುವಂತೆ ಪ್ರಕಟಣೆತಿಳಿಸಿದೆ.