ಉಡುಪಿ: ಡಿಸೆಂಬರ್ 20:ಉಡುಪಿ ವಕೀಲರ ಸಂಘ ಹಾಗೂ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಸಹಯೋಗದೊಂದಿಗೆ ನ್ಯಾಯವಾದಿ, ನ್ಯಾಯಾಧೀಶರು ಮತ್ತು ನ್ಯಾಯಾಲಯದ ಸಿಬ್ಬಂದಿಗಳಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಡಿ.21ರಂದು ಬೆಳಿಗ್ಗೆ 9.30ಕ್ಕೆ ಉಡುಪಿಯ ನ್ಯಾಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಉದ್ಘಾಟಿಸ ಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಅಧ್ಯಕ್ಷತೆ ವಹಿಸಲಿರುವರು. ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಭಾಗವಹಿಸಲಿರು ವರು. ಉಡುಪಿ ವಕೀಲರ ಸಂಘದ ಸದಸ್ಯರಿಗಾಗಿ ಕಸ್ತೂರ್ಬಾ ಆಸ್ಪತ್ರೆಯ ವಿಶೇಷ ಆರೋಗ್ಯ ಕಾರ್ಡ್ ಹಾಗೂ ಉಡುಪಿ ಲಾಯರ್ಸ್ ಪ್ರಿವಿಲೆಜ್ ಕಾರ್ಡ್ನ್ನು ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.