ಉಡುಪಿ:ಡಿಸೆಂಬರ್ 20: ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಡಿಸೆಂಬರ್ 31 ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆಅ ಅವಕಾಶ ಕಲ್ಪಿಸಲಾಗಿದೆ
ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ಕುಟುಂಬದ ಸದಸ್ಯರ ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ತೆಗೆಯುವ ಬಗ್ಗೆ ಲಾಗಿನ್ ನೀಡಿದ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ