ಉಡುಪಿ: ಡಿಸೆಂಬರ್ 21 :ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ತಮ್ಮ21ಪ್ರಮುಖ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸಿ ಧರಣಿ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಯವರಿಗೆ ಮನವಿ ನೀಡಲಾಯಿತು.
ಪ್ರತಿಭಟನೆ ಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ ದ ಜಿಲ್ಲಾ ಕಾರ್ಯದರ್ಶಿ ಸುನಂದ,ಉಡುಪಿ ತಾಲೂಕು ಅಧ್ಯಕ್ಷ ರಾದ ರತ್ನ ಕಾರ್ಯದರ್ಶಿ ಸುಲೋಚನ,ಕೋಶಾಧಿಕಾರಿ ಮಂಜುಳಾ, ಶಿಕಾಮಣಿ,ಕಲಾವತಿ,ಕುಸುಮ ಕಾಪು ಸಿಐಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ರಾದ ಬಾಲಕೃಷ್ಣ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಕಲ್ಲಾಗಾರ,ಕೋಶಾಧಿಕಾರಿ ಶಶಿಧರ ಗೋಲ್ಲ, ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರಾದ ಚಿಕ್ಕಮೊಗವೀರ ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್. ಕಾಂಚನ್,ಸಿಐಟಿಯು ಮುಖಂಡರಾದ ನಾಗೇಶ್ ಉಪಸ್ಥಿತರಿದ್ದರು