ಕುಂದಾಪುರ :ಡಿಸೆಂಬರ್ 22 :ಕುಂದಾಪುರ ತಾಲೂಕಿನ ತ್ರಾಸಿ ಬೀಚಿನಲ್ಲಿ ಟೂರಿಸ್ಟ್ ಬೋಟ್‌ವೊಂದು ಸಮುದ್ರದಲ್ಲಿ ಪಲ್ಟಿಯಾದ ಪರಿಣಾಮ ಬೋಟ್ ರೈಡರ್ ನಾಪತ್ತೆಯಾದ ಘಟನೆ ಶನಿವಾರ ಸಂಜೆ ನಡೆದಿದೆ.
ತ್ರಾಸಿ ಬೀಚಿನ ಅನುಗ್ರಹ ಬಾರ್ ಸಮೀಪ ಟೂರಿಸ್ಟ್ ಬೋಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು ಶನಿವಾರ ಸಂಜೆ ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್ ಎಂಬುವರು ಟೂರಿಸ್ಟ್ ಬೋಟಿನಲ್ಲಿ ಬೋಟಿಂಗ್ ನಡೆಸುತ್ತಿರುವಾಗ ಬೋಟ್ ಪಲ್ಟಿ ಆದ ಪರಿಣಾಮ ಪ್ರವಾಸಿಗ ಹಾಗೂ ರೈಡರ್ ಇಬ್ಬರೂ ನೀರಿಗೆ ಬಿದ್ದ ಪರಿಣಾಮ ರೈಡರ್ ನಾಪತ್ತೆಯಾಗಿದ್ದಾರೆ.
ಲೈಫ್ ಜಾಕೆಟ್ ಧರಿಸಿದ್ದ ಪರಿಣಾಮ ಪ್ರವಾಸಿಗ ಪ್ರಶಾಂತ್ ಬಚಾವ್ ಆಗಿದ್ದಾರೆ. ನಾಪತ್ತೆಯಾಗಿರುವ ಬೋಟ್ ರೈಡರ್ ನನ್ನು ಮೂಲತ ಮುರ್ಡೇಶ್ವರದ ಪ್ರಸ್ತುತ ಟ್ರಾಸಿಯಲ್ಲಿ ನೆಲೆಸಿರುವ ರವಿದಾಸ್ ಎಂದು ಗುರುತಿಸಲಾಗಿದೆ.
ನಾಪತ್ತೆಯಾದ ರವಿದಾಸ್ ನ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಇನ್ನಷ್ಟೇ ದಾಖಲಾಗಬೇಕಿದೆ.