ಬೆಂಗಳೂರು :ಡಿಸೆಂಬರ್ 25:ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಲಾಗಿದೆ. ಇನ್ಮುಂದೆ ಮಾರುಕಟ್ಟೆಯಲ್ಲಿ ನಂದಿನಿ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿನಿ ವತಿಯಿಂದ ಪ್ರಥಮ ಬಾರಿಗೆ ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಕೆಎಂಎಫ್ ಅಧ್ಯಕ್ಷರಾದಂತ ಭೀಮ ನಾಯ್ಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.