ಉಡುಪಿ : ಡಿಸೆಂಬರ್ 27:ಬಿಜೆಪಿ ಉಡುಪಿ ಜಿಲ್ಲೆ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ ಆಚರಣೆಯ ಅಂಗವಾಗಿ, ಥೈಲ್ಯಾಂಡ್ ಯೂತ್ ಯೋಗ ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್, ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್(ರಿ.) ಶಿವಮೊಗ್ಗ ಕರ್ನಾಟಕ ಇವರ ಸಹಭಾಗಿತ್ವದಲ್ಲಿ ಡಿ.9ರಂದು ಥೈಲ್ಯಾಂಡ್ ನ ಪಟ್ಟಾಯದಲ್ಲಿ ನಡೆದ 6ನೇ ವರ್ಷದ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭಾರತದಿಂದ 11 ರಿಂದ 15 ವರ್ಷದ ವಯೋ ವಿಭಾಗದಲ್ಲಿ ಪ್ರತಿನಿಧಿಸಿ, ಚಿನ್ನದ ಪದಕ ಪಡೆದು ಪ್ರಥಮ ಸ್ಥಾನಿಯಾಗಿರುವ ಧನ್ವಿ ಪೂಜಾರಿ ಮರವಂತೆ, ಬೆಳ್ಳಿ ಪದಕ ಪಡೆದಿರುವ ಸುಷ್ಮಾ ತೆಂಡೂಲ್ಕರ್ ಹಾಗೂ ಅನನ್ಯ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ರಾಘವೇಂದ್ರ ಕುಂದರ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅನಿತಾ ಆರ್. ಕೆ., ನಳಿನಿ ಪ್ರದೀಪ್ ರಾವ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಮುಖರಾದ ಸುಜಾಲ ಸತೀಶ್, ಪವಿತ್ರಾ ಶೆಟ್ಟಿ, ಮಾಲಿನಿ ಶೆಟ್ಟಿ, ರಮ್ಯಾ ರಾವ್ ಮತ್ತಿತರರು ಉಪಸ್ಥಿತರಿದ್ದರು.