ಹೊಸ ವರ್ಷಾಚರಣೆ :ಡಿಸೆಂಬರ್ 31:ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರವು ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
ನಂದಿಬೆಟ್ಟ:ಇಂದು ಸಂಜೆ 6 ಗಂಟೆಯಿಂದ ಜನವರಿ 1 ರ ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ. ಡಿಸೆಂಬರ್ 31ಸಂಜೆ 6 ಗಂಟೆಯಿಂದ 2025 ಜನವರಿ1ರಂದು ಬೆಳಿಗ್ಗೆ 7 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿದೆ.
ಚಾಮುಂಡಿ ಬೆಟ್ಟ :- ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಸಂಜೆ 7 ಗಂಟೆ ನಂತರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಕಾವೇರಿ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ:-ಕೆಆರ್ ಎಸ್ ಹಿನ್ನೀರು. ಬಲಮುರಿ, ಎಡಮುರಿ, ಕಾವೇರಿ ನದಿ ತೀರಕ್ಕೆ ಜ.1 ರಾತ್ರಿವರೆಗೂ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಲಾಗಿದೆ. ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ತೀರದಲ್ಲೂ ನಿರ್ಬಂಧ
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ:-ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿ ಹಲವು ತಾಣಗಳಲ್ಲಿ ಪ್ರವಾಸಿಗರಿಗೆ ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ನಿರ್ಬಂಧ ವಿಧಿಸಲಾಗಿದೆ.