ಉಡುಪಿ, ಜನವರಿ .4: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಅನುದಾನದಿಂದ ನೀಡಲಾಗುವ ಪ್ರೋತ್ಸಾಹಧನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024ನೇ ಸಾಲಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ ಅಥವಾ ಪದಕ ಪಡೆದ ಅರ್ಹ ಕ್ರೀಡಾಪಟುಗಳಿಂದ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ದೃಢೀಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820- 2521324, 9845432303ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.