ಉಡುಪಿ :ಜನವರಿ 07: ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಉಚಿತ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ,ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಜಿಲ್ಲಾಡಳಿತದ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.