ಉಡುಪಿ:ಜನವರಿ 08: ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜನವರಿ.6ರಂದು ನಡೆದಿದೆ .
ಮೃತರನ್ನು ಸಂತೋಷ್(28) ಎಂದು ಗುರುತಿಸಲಾಗಿದೆ,ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂತೋಷ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸಂತೋಷ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹಿರಿಯಡ್ಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ