ಉಡುಪಿ: ಜನವರಿ 11:ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ 2022-23 ಹಾಗೂ 2023-24 ನೇ ಸಾಲಿನಲ್ಲಿ ಉತ್ತೀರ್ಣರಾದ ಪದವಿ, ಸಾನತಕೋತ್ತರ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ ಜನವರಿ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಅನಂತನಗರ ಮಣಿಪಾಲ ಸಂಸ್ಥೆಯ ಸಹಾಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ಲೇಸ್‌ಮೆಂಟ್ ವಿಭಾಗ, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ: 0820-2570244
ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಕಛೇರಿ ಪ್ರಕಟಣೆ ತಿಳಿಸಿದೆ.