ಉಡುಪಿ: ಜನವರಿ 13: ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ಸಾಸ್ತಾನ ಟೋಲ್ ಗೇಟ್ ಗೆ ಡಿಕ್ಕಿ ಹೊಡೆದು ಟೋಲ್ ಬೂತ್ ಗೆ ಹಾನಿಯಾದ ಘಟನೆ ಜನವರಿ 12ಭಾನುವಾರ ರಾತ್ರಿ ಸಂಭವಿಸಿದೆ.
ಬ್ರಹ್ಮಾವರ ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಾಸ್ತಾನ ಟೋಲ್ ಗೇಟ್ ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟೋಲ್ ಗೇಟ್ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.