ಉಡುಪಿ :ಜನವರಿ 15:ಶ್ರೀಕೃಷ್ಣ ಮಠದಲ್ಲಿ ವಾರ್ಷಿಕವಾಗಿ ಸಪ್ತೋತ್ಸವದ ಮರುದಿನ ನಡೆಯುವ ಚೂರ್ಣೋತ್ಸವ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಬುಧವಾರ ವಿಜೃಂಭಣೆಯಿಂದ ನೆರವೇರಿತು.
ಶ್ರೀಕೃಷ್ಣ ಮುಖ್ಯಪ್ರಾಣ ಉತ್ಸವ ಮೂರ್ತಿಯನ್ನು ಸುವರ್ಣ ಪಾಲಕ್ಕಿಯಲ್ಲಿ ತಂದು ಬ್ರಹ್ಮರಥದಲ್ಲಿ ಕೂರಿಸಲಾಯಿತು.
ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ನೈವೇದ್ಯ ಸಮರ್ಪಣೆ, ಮಹಾಮಂಗಳಾರತಿಯನ್ನು ಭಕ್ತಿ, ಶ್ರದ್ಧೆಯಿಂದ ಮಾಡಲಾಯಿತು.ಪರ್ಯಾಯ ಶ್ರೀಪಾದರು ಮಧ್ವಮಂಟಪದಲ್ಲಿ ತೊಟ್ಟಿಲು ಪೂಜೆ ನೆರವೇರಿಸಿದರು.
ಅನಂತರ ಮಧ್ವ ಸರೋವರದಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಉತ್ಸವ ಮೂರ್ತಿಗಳಿಗೆ ಅವಭೃಥ ಸ್ನಾನ ನಡೆಯಿತು.
ಅನಂತರ ಮಧ್ವ ಸರೋವರದಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಉತ್ಸವ ಮೂರ್ತಿಗಳಿಗೆ ಅವಭೃಥ ಸ್ನಾನ ನಡೆಯಿತು.ಭಾರೀ ಜನಸ್ತೋಮ ನೆರೆದಿದ್ದು, ಮಧ್ಯಾಹ್ನ ಸಾವಿರಾರು ಮಂದಿ ಭೋಜನ ಪ್ರಸಾದ ಸ್ವೀಕರಿಸಿದರು.