ಉಡುಪಿ :ಜನವರಿ 29:ಸಂತೆಕಟ್ಟೆ ಬಳಿ ಕಾರೊಂದು ಲಾರಿಯ ಹಿಂಬದಿಯಿಂದ ವಾಹನವನ್ನು ಹಿಂದಿಕ್ಕಲು ಯತ್ನಿಸಿದ ಘಟನೆ ಜ.28ರ ಮಂಗಳವಾರ ನಡೆದಿದೆ.
ಕುಂದಾಪುರ ಕಡೆಗೆ ಹೋಗುತ್ತಿದ್ದ ಟ್ರಕ್ ಅನ್ನು ಹಿಂದಿಕ್ಕಲು ಯತ್ನಿಸಿದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ತೀವ್ರ ಜಖಂಗೊಂಡಿದೆ.
ಕಾರಿನ ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಗರ ಸಂಚಾರ ಪೊಲೀಸರು ಕೂಡಲೇ ಆಗಮಿಸಿ ರಸ್ತೆಯನ್ನು ತೆರವುಗೊಳಿಸಿ ಸಂಚಾರ ಯಥಾಸ್ಥಿತಿಗೆ ತಂದರು.