ಉಡುಪಿ:ಫೆಬ್ರವರಿ 12: ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.15ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಹೆಗ್ಗುಂಜೆ ಗ್ರಾಪಂ ವ್ಯಾಪ್ತಿಯಲ್ಲಿ ಫೆ.12ರ ಬೆಳಗ್ಗೆ 6 ಗಂಟೆಯಿಂದ 15ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.