ಉಡುಪಿ : ಫೆಬ್ರವರಿ 25:ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪನಕಟ್ಟೆ ತಿರುವಿನ ಬಳಿ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ (ಫೆ.25) ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ.
ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ.
ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸುಬ್ರಮಣ್ಯ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ನಡೆದ ಬಳಿಕ ಸ್ಥಳಕ್ಕೆ ಧಾವಿಸಿದ ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಗುರುರಾಜ್ ಭಟ್, ಸುಧಾಕರ ಪೂಜಾರಿ ಕೃಷ್ಣ ಆಚಾರ್ಯ ಹಾಗೂ ಶಿರ್ವ ಪೊಲೀಸ್ ಸಿಬ್ಬಂದಿಯವರ ಸಹಕಾರದೊಂದಿಗೆ ಜೆಸಿಬಿ ಮೂಲಕ ಲಾರಿಯನ್ನು ಎತ್ತಿ ಚಾಲಕನ ಮೃತದೇಹವನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ