ಕುಂದಾಪುರ :ಫೆಬ್ರವರಿ 25: ಸಾಸ್ತಾನ ಚರ್ಚ್ ಸಮೀಪದ ಬಸ್ ನಿಲ್ದಾಣದ ಬಳಿ ಕುಂದಾಪುರದಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ
ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ತಕ್ಷಣವೇ ಟೋಲ್ ಆಂಬ್ಯುಲೆನ್ಸ್‌ನಲ್ಲಿ ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಕೋಟ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನೆಯ ತನಿಖೆ ನಡೆಸುತ್ತಿದ್ದಾರೆ.