ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ ಅವರ ಪ್ರಚಾರ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು ಮಧ್ಯಾಹ್ನ ಏಪ್ರಿಲ್ 24ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಮತದಾರರಿಗೆ ಜಾಗೃತಿ ಮೂಡಿಸಲು ಉಡುಪಿ ನಗರದ ಪ್ರಮುಖ ರಸ್ತೆಯಲ್ಲಿ ಪಾದಯಾತ್ರೆಯನ್ನ ಮಾಡಿದರು
ಪಾದಯಾತ್ರೆಯು ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯಿಂದ ಪ್ರಾರಂಭಗೊಂಡು ಸರ್ವಿಸ್ ಬಸ್ ನಿಲ್ದಾಣದ ಮೂಲಕ ಕೆಎಮ್ ಮಾರ್ಗವಾಗಿ ಕೋರ್ಟ್ ರಸ್ತೆ ಜೋಡುಕಟ್ಟೆ ಮೂಲಕ ತೆರಳಿ ಅಜ್ಜರಕಾಡಿ ನಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಸಮಾಪನಾ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಕಾಂಚನ್ ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಸೇರದಂತೆ ರಾಜ್ಯ ಜಿಲ್ಲಾ ಮಟ್ಟದ ನಾಯಕರು ಕಾರ್ಯಕರ್ತರು ಪಾಲ್ಗೊಂಡಿದ್ದರು