ಉಡುಪಿ : ಮಾರ್ಚ್ 04:ಆಟೋ ರಿಕ್ಷಾವೊಂದು ಟ್ರಕ್ ಅನ್ನು ಓವರ್‌ಟೇಕ್ ಮಾಡಲು ಹೋಗಿ ಪಲ್ಟಿಯಾಗಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಗುಂಡಿಬೈಲ್ ರಸ್ತೆಯ ಬಳಿ ಸಂಭವಿಸಿದೆ.
ಟ್ರಕ್ ಮಣಿಪಾಲದಿಂದ ಗುಂಡಿಬೈಲ್ ರಸ್ತೆಯ ಮೂಲಕ ಸಂತೆಕಟ್ಟೆಯ ಕಡೆಗೆ ಸಾಗುತ್ತಿತ್ತು. ಇದೇ ವೇಳೆ ಉಡುಪಿಯಿಂದ ಹಾಲಾಡಿಯ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ಟ್ರಕ್ ಅನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅದೃಷ್ಟವಶಾತ್, ಆಟೋ ರಿಕ್ಷಾ ಚಾಲಕನಿಗೆ ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.