ಬೆಂಗಳೂರು :ಮಾರ್ಚ್ 08:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ನೀಡುವಂತ ಜೀವಮಾನ ಸಾಧನೆ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿ ಭಾರತೀಯ ಖ್ಯಾತ ಹೆಸರಾಂತ ಚನಚಿತ್ರ ನಟಿ ಶಬಾನಾ ಅಜ್ಮಿಗೆ ಈ ಪ್ರಶಸ್ತಿ ಸಂದಿದೆ.
ಈ ಕುರಿತಂತೆ ನಡವಳಿಯನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ.
2024-25ನೇ ಸಾಲಿನಲ್ಲಿ ಆಯೋಜಿಸಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದ್ದ ಮೇರೆಗೆ ಈ ಆಯ್ಕೆ ಸಮಿತಿಯು ದಿನಾಂಕ:28/02/2025ರಂದು ಸಭೆ ಸೇರಿ ಅವಿರೋಧವಾಗಿ ಆಯ್ಕೆ ಮಾಡಿರುವ ಮೂವರು (03) ಸಂಭಾವ್ಯ ಗಣ್ಯರ ಪಟ್ಟಿಯನ್ನು ಲಗತ್ತಿಸುತ್ತಾ, ಸಭಾ ನಡವಳಿಯನ್ವಯ ಈ ಪೈಕಿ ಒಬ್ಬರನ್ನು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಏಕಕಡತದಲ್ಲಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು ಕೋರಿರುತ್ತಾರೆ. ಪುಸ್ತಾವನೆಯನ್ನು ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಲಾಗಿದೆ ಎಂದಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024-25 ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ “ಜೀವಮಾನ ಸಾಧನೆ ಪ್ರಶಸ್ತಿ”ಗೆ “ಶಬಾನಾ ಆಜಿ ಭಾರತೀಯ ಖ್ಯಾತ ಹೆಸರಾಂತ ಚಲನಚಿತ್ರ ನಟಿ ಇವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.