ಕಾರ್ಕಳ: ಮಾರ್ಚ್ 14:ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಲಾರಿಯೊಂದು ರಸ್ತೆಗೆ ಉರುಳಿದ ಘಟನೆ ಸಾಣೂರು ಗ್ರಾಮದ ಪುಕ್ಕೇರಿ ಬೈಪಾಸ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಅಪಘಾತದಿಂದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲ್ಪೆಯಿಂದ ಮೀನನ್ನು ತುಂಬಿಸಿಕೊಂಡ ಲಾರಿ ಕಾರ್ಕಳ, ಮೂಡುಬಿದಿರೆ ಕಡೆಗೆ ಸಂಚರಿಸುತ್ತಿತ್ತು ಎನ್ನಲಾಗಿದೆ. ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ ಆಗಮಿಸಿ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.