ಬೆಂಗಳೂರು :ಮಾರ್ಚ್ 15:ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಸೈಬರ್ ಅಪರಾಧ ಪ್ರಕರಣಗಳು ಅಧಿಕವಾಗುತ್ತಿವೆ, ಕಳೆದ ವರ್ಷ 22 ಸಾವಿರ ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಕಳೆದ ವರ್ಷ 22 ಸಾವಿರ ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸೆನ್ ಪೊಲೀಸ್ ಠಾಣೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ.
ಸೈಬರ್ ಕ್ರೈಂ ಪ್ರಕರಣಗಳನ್ನು ನಿಯಂತ್ರಿಸುವ ಹಾಗೂ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಪ್ರಚೋದಕಾರಿ ಪೋಸ್ಟ್‌ಗಳಿಗೆ ನಿಯಂತ್ರಣ ಹೇರಲು ವಿಶೇಷ ಪೊಲೀಸ್ ಘಟಕ ಆರಂಭಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.