ಮಂಗಳೂರು: ಮಾರ್ಚ್ 17:ಮಂಗಳೂರಿನ ಮೇರಿಹಿಲ್ ಪ್ರದೇಶದ ಅಪಾರ್ಟ್‌ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಬಿದ್ದು 13 ವರ್ಷದ ಬಾಲಕ ದುರಂತವಾಗಿ ಸಾವನ್ನಪ್ಪಿದ್ದಾನೆ.
ಮೃತ ಬಾಲಕನನ್ನು ಸುದೇಶ್ ಭಂಡಾರಿ ಎಂಬವರ ಪುತ್ರ ಸಮರ್ಜಿತ್ ಎಂದು ಗುರುತಿಸಲಾಗಿದೆ. ಬಾಲಕ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಆಕಸ್ಮಿಕವಾಗಿ ಐದನೇ ಮಹಡಿಯಿಂದ ಬಿದ್ದ ಪರಿಣಾಮ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ತುರ್ತು ಚಿಕಿತ್ಸೆ ಸಲ್ಲಿಸಿ ಸಮರ್ಜೀತ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ,ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ. ಕಾವೂರು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.